My day is the light of your love
You are the moon of my night
Your grace comforts my journey
You are my eternal delight
From fragrant blooms of your smile
You flow like nectar-streams
You're my goal, my accomplishment
The destination of my dreams
With your smile, laughter, words
My life's a lofty abode
Unto me from the beatific moon
A holy gleam has flowed
Original by K S Narsimhaswamy
ನಿನ್ನೊಲುಮೆಯಿಂದಲೆ ಬಾಳು ಬೆಳಕಾಗಿರಲು
ಚಂದ್ರಮುಖಿ ನೀನೆನಲು ತಪ್ಪೇನೆ ?
ನಿನ್ನ ಸೌಜನ್ಯವೇ ದಾರಿ ನೆರಳಾಗಿರಲು
ನಿತ್ಯ ಸುಖಿ ನೀನೆನಲು ಒಪ್ಪೇನೆ ?
ನಿನ್ನ ನಗೆ ಮಲ್ಲಿಗೆಯ ಪರಿಮಳದ ಪಾತ್ರೆಯಲಿ
ಚೆಲ್ಲಿ ಸೂಸುವ ಅಮೃತ ನೀನೇನೆ
ನನ್ನ ಕನಸುಗಳೆಲ್ಲ ಕೈಗೊಳುವ ಯಾತ್ರೆಯಲಿ
ಸಿದ್ಧಿಸುವ ಧನ್ಯತೆಯು ನೀನೇನೆ
ನಿನ್ನ ಕಿರು ನಗೆಯಿಂದ ನಗೆಯಿಂದ ನುಡಿಯಿಂದ
ಎತ್ತರದ ಮನೆ ನನ್ನ ಬದುಕೆನೆ
ಚಂದ್ರನಲಿ ಚಿತ್ರಿಸಿದ ಚೆಲುವಿನೊಳ ಗುಡಿಯಿಂದ
ಗಂಗೆ ಬಂದಳು ಇತ್ತ ಕಡೆಗೇನೆ
No comments:
Post a Comment